ಒಲವೇ ಜೀವನ ಸಾಕ್ಷಾತ್ಕಾರ ಫೆಬ್ರವರಿ 3, 2021
Posted by Bala in ಬದುಕು.add a comment
ಒಲವೇ ಜೀವನ ಸಾಕ್ಷಾತ್ಕಾರ
ಒಲವೇ ಮರೆಯದ ಮಮಕಾರ
ಧುಮ್ಮಿಕ್ಕಿ ಹರಿಯುವ ಜಲಧಾರೆಯಲ್ಲೊ
ಧುಂಭಿಯ ಹಾಡಿನ ಝೇಂಕಾರದಲ್ಲೊ
ಘಮ್ಮನೆ ಹೊಮ್ಮಿರುವ ಹೊಸ ಹೂವಿನಲ್ಲೊ
ತುಂಬಿದೆ ಒಲವಿನ ಸಾಕ್ಷಾತ್ಕಾರ
ವಸಂತ ಕೋಗಿಲೆ ಪಂಚ ಮನೋಂಚರ
ಗಾಂಧಾರ ಭಾಷೆಯ ಹಕ್ಕಿಗಳಿಂಚರ
ಈ ಮಲೆನಾಡಿನ ಭೂರಮೆ ಶೃಂಗಾರ
ಚೆಲುವಿನ ಒಲವಿನ ಸಾಕ್ಷಾತ್ಕಾರ
ಒಲವಿನ ಪೂಜೆಗೆ ಒಲವೇ ಮಂದಾರ
ಒಲವೇ ಬದುಕಿನ ಬಂಗಾರ
ಒಲವಿನ ನೆನಪೇ ಹೃದಯಕೆ ಮಧುರ
ಒಲವೇ ದೈವದ ಸಾಕ್ಷಾತ್ಕಾರ
ಕವಿ – ಕಣಗಾಲ ಪ್ರಭಾಕರ ಶಾಸ್ತ್ರಿ